ನಮ್ಮ ತಾಯಿಯ ಅಜ್ಜಿಯ ಊರು ಈ ಕಣಕಟ್ಟೆ. ಅಲ್ಲಿನ ದೇವಿ ದುಗ್ಗಮ್ಮನನ್ನು ನೋಡಲು ಹೊರಟಿದ್ದಾದರೂ ನಮ್ಮ ಮುತ್ತಜ್ಜಿಯ ಊರು , ಅಲ್ಲಿನ ನಮ್ಮ ಅಜ್ಜಿಯ ಮನೆ, ಎಲ್ಲವನ್ನೂ ನೋಡುವ ಆಸೆಯೇ ನಮ್ಮಲ್ಲಿ ಹೆಚ್ಚಾಗಿದ್ದು ಸುಳ್ಳಲ್ಲ.ನಾವು ಶುಕ್ರವಾರ ಸಂಜೆ ವೇಳೆ ಹೊರಟ್ಟಿದ್ದರಿಂದ ಅರಸೀಕೆರೆ ಸೇರಿದ್ದು ರಾತ್ರಿ ಹನ್ನೆರೆಡು ಘಂಟೆಗೆ . ಹರಿಹರಪುರ ಶ್ರೀಧರ್‌ರವರು ಸಲಹೆಯಂತೆ ಅಲ್ಲಿನ ಮಯೂರ ಲಾಡ್ಜ್‌ನಲ್ಲಿ ಅಂದು ತಂಗಿದೆವು. ಬೆಳಗ್ಗೆ ೮.೩೦ ಗೆ ಹೊಟ್ಟೆ ತುಂಬಿಸಿಕೊಳ್ಳಲು ಅಯೋಧ್ಯ ಹೋಟೆಲ್‌ಗೆ ನುಗ್ಗಿದೆವು. ರುಚಿಯಾದ ತಿಂಡಿಗಳು, ನಿಜಕ್ಕೂ ಹೋಟೆಲ್ ಚಿಕ್ಕದಾದರೂ ತಿಂಡಿ ಬಹಳ ರುಚಿ. ನಿಲ್ಲಲೂ ಜಾಗವಿಲದಂತಹ ಪರಿಸ್ಥಿತಿಯಲ್ಲೂ ತಮ್ಮ ಸರದಿಗಾಗಿ ಜನ ಕಾಯುತ್ತಿರುತ್ತಾರೆ.ಅಲ್ಲಿಂದ ಹೊರಟಿದ್ದು ಸೀದಾ ಕಣಕಟ್ಟೆಗೆ ಬಾಣಾವರದ ದಾಟಿ ಹೋಗುತ್ತಿದಂತೆ ಅಲ್ಲಿನ ಹಸಿರು ಕಣ್ಣು ತುಂಬಿತು . ತೀರ ಬಯಲು ಸೀಮೆಯಲ್ಲಿ ಬೆಳೆದ ನಮಗೆ ನಮ್ಮ ಮಕ್ಕಳಿಗೆ ಅವನ್ನು ನೋಡುವುದೇ ಒಂಥರಾ ಪರಮಾನಂದ. ನಮ್ಮ ತಾಯಿಗಂತೂ ಸಡಗರ . ಎಷ್ಟಾದರೂ ತಮ್ಮ ಅಜ್ಜಿಯ ಊರಲ್ಲವೇ?ಅಂತೂ ಇಂತೂ ನಾವು ಬಯಸುತ್ತಿದ್ದ ಕಣಕಟ್ಟೆ ಬಂದೇ ಬಿಟ್ಟಿತು ಅಮ್ಮ ಅಲ್ಲಿನ ಅಂಗಡಿಯೊಂದರಲ್ಲಿ ಮಾತಾಡಿದರು . ನರಸಕ್ಕ(ನಮ್ಮ ಮುತ್ತಜ್ಜಿಯ ಹೆಸರು) ತುಂಬಾನೆ ಪ್ರಸಿದ್ದವಾದ ಹೆಸರು ಅಲ್ಲಿನ ಊರಿನವರಿಗೆ . ಅವರು ಈಗ ಇಲ್ಲವಾದರೂ ಅವರ ಹೆಸರು ಮಾತ್ರ ಜನರ ನಾಲಿಗೆಯ ಮೇಲೆ ಇನ್ನೂ ಹರಿದಾಡುತ್ತಿದೆ. ನರಸಕ್ಕನ ಮೊಮ್ಮಗಳು ತನ್ನ ಮೊಮ್ಮ್ಮಕ್ಕಳೊಂದಿಗೆ ಊರಿಗೆ ಭೇಟಿ ನೀಡಿದ್ದೇ ಅಲ್ಲಿನ ಜನರ ಕೌತಕಕ್ಕೆ ಕಾರಣವಾಗಿತ್ತು.ಮೊದಲು ದೇವಿಯ ದರ್ಶನ ನಂತರ ಊರನ್ನು ನೋಡುವುದು ಎಂದು ನಿರ್ಧಾರವಾಯ್ತು ದುಗ್ಗಮ್ಮ್ಮ ಅಲ್ಲಿನ ಕಣಕಟ್ಟೆ ಕೆರೆಯ ಏರಿಯ ಮೇಲೆ ಉದ್ಭವಾಗಿರುವಂತಹ ದೇವಿ . ಕಣಕಟ್ಟೆ ಊರಿನ ಜನರ ರಕ್ಷೆಗೆಂದೆ ಉದ್ಭವಿಸಿರುವಂತಹವಳೆಂದು ಪ್ರತೀತಿ. ನಮ್ಮ ತಾಯಿಯ ಮನೆಯವರೆಲ್ಲಾ ಯಾವುದೇ ಶುಭ ಕಾರ್ಯಕ್ಕೆ ಹೋಗುವ ಮುನ್ನ ಆ ದೇವಿಯ ದರ್ಶನ ಪಡೆದೇ ಹೋಗುತ್ತಾರೆ .
ಅಲ್ಲಿ ನಾವುಗಳೇ ದೇವಿಗೆ ಗರ್ಭಗುಡಿಯೊಳಗೆ ಹೋಗಿ ಪೂಜೆ ಮಾಡಬಹುದು. ಜಾತಿಯ ಪ್ರಶ್ನೆ ಅಂತಲ್ಲ ಆದರೆ ಬ್ರಾಹ್ಮಣರಿಗೆ ಮಾತ್ರ ಅಲ್ಲಿನ ಪೂಜಾರಿಗಳು ಕೊಡುವ ಮರ್ಯಾದೆ ಇದು.
ನಾವು ಹೋದಾಗ ದೇವಸ್ಥಾನ ಬಾಗಿಲು ಹಾಕಿತ್ತು. ನಮ್ಮ ಭಾವ ಹಾಗು ಅಮ್ಮ ಪೂಜಾರಿಯನ್ನು ಕರೆದುಕೊಂಡು ಬರಲು ಮತ್ತೆ ಊರಿಗೆ ಹೋದರು.
ಅಷ್ಟು ಹೊತ್ತಿಗಾಗಲೇ ಆ ಪೂಜಾರಿಗೆ ಯಾರು ಬ್ರಾಮ್ರು ಅಮ್ಮಾವರ ದರ್ಶನಕ್ಕೆ ಬಂದವ್ರೆ ಎಂಬ ವಿಶ್ಯ ಗೊತ್ತಾದದ್ದರಿಂದ ಆತ ಕೂಡಲೆ ಬಸ್ ಮಾಡಿಕೊಂಡು ಬಂದಿದ್ದ್ದ . ನಂತರ ನಮ್ಮ ಭಾವನಿಗಾಗಿ ಕಾದು ಕೊನೆಗೆ ಸುಮಾರು ಒಂದು ಘಂಟೆ ಕಾಯುವಂತಾಯ್ತು .
ಕೊನೆಗೂ ಆ ತಾಯಿಯ ದರ್ಶನ ಮಾಡಿಕೊಂಡು , ಪೂಜೆ ಮಾಡಿ ಅಲ್ಲಿನ ದೇವಸ್ಥಾನದ , ಕೆರೆಯ ಒಂದಷ್ಟು ಫೋಟೊ ತೆಗೆದುಕೊಂಡು ನಂತರ ಇನ್ನೇನು ಹೊರಡಬೇಕೆಂದುಕೊಂಡೆವು ಆಗ ನಮ್ಮ ಅತ್ತೆ ಬೆಳಗೂರು ಶ್ರೀ ಆಂಜನೇಯ ಸ್ವಾಮಿಯ ದರ್ಶನ ಮಾಡಿಕೊಂಡು ಹೊರಡೋಣ ಎಂದರು.
ಅಂತೆಯೇ ದರ್ಶನ ಮುಗಿಸಿಕೊಂಡು ಬರುವಷ್ಟರಲ್ಲಿ ಕಣಕಟ್ಟೆಗೆ ಬರುವಷ್ಟರಲ್ಲಿ ಸಂಜೆ ಏಳು ಘಂಟೆಯಾಗಿತ್ತು . ಅಮ್ಮನ ಅಜ್ಜಿಯ ಮನೆ ನೋಡುವ ಕಾತುರ ನಮಗೆ ಇನ್ನೂ ಹೆಚ್ಚಾಗಿತ್ತು.
ಅಂತೂ ಇಂತು ನಮ್ಮ ಮುತ್ತಜ್ಜಿಯ ಮನೆ ಇದ್ದ ಜಾಗಕ್ಕೆ ಬಂದೆವು . ನಮ್ಮ ಆಸೆ ಎಲ್ಲಾ ಟುಸ್ ಆಯಿತು ಏಕೆಂದರೆ ನಮ್ಮ ಮುತ್ತಜ್ಜಿಯ ಮನೆ ಇದ್ದ ಜಾಗ ಏರ್‌ಟೆಲ್ ಟವರ್‌ಗೆ ಆಶ್ರಯವಾಗಿತ್ತು ನಮ್ಮ ಮುತ್ತಜ್ಜಿಯ ಮನೆ ಈಗ ಅಲ್ಲಿತ್ತು ಎಂಬುದಕ್ಕೆ ಕುರುಹೂ ಇರಲಿಲ್ಲ . ಅಲ್ಲಿಗೆ ಹೋಗುವುದಿರಲಿ ನೋಡುವುದಕ್ಕೂ ಬಹಳ ಕಷ್ಟ ಪಡಬೇಕಿತ್ತು. ರಾತ್ರಿ ಯಾದ್ದರಿಂದ ಫೋಟೋಗೂ ಸಿಗಲಿಲ್ಲ . ಆದರೂ ನಮ್ಮ ಯಜಮಾನರು ಬಂದದ್ದು ಬರಲಿ ಎಂದು ಒಂದಷ್ಟು ಕ್ಲಿಕ್ಕಿಸಿದರು.
ಊರು ಬಣ ಬಣ ಅನ್ನುತ್ತಿತ್ತು . ಅಲ್ಲಿ ಮನೆಗಳಿದ್ದರೂ ವಾಸಿಸಲು ಜನರೇ ಇಲ್ಲ ಹಾಗೂ ಹೀಗೂ ನಮ್ಮ ತಾಯಿಯ ಚಿಕ್ಕಮ್ಮನ ವಾರಿಗೆಯವರೊಬ್ಬರು ಸಿಕ್ಕರು. ಅಲ್ಲಿ ಇನ್ನೊಂದೆರೆಡು ನಿಮಿಷ ಇದ್ದರೆ ತಲೆ ಚಿಟ್ಟು ಹಿಡಿಯುತ್ತದೆಯೇನೋ ಎಂಬ ಅನುಮಾನ ಕಾಡತೊಡಗಿತು ಕೇವಲ ಏಳು ಘಂಟೆ ಅಂಥ ನೀರವ ಮೌನ , ಕತ್ತಲು ನಾನೆಂದೂ ಕಂಡಿದ್ದಿಲ್ಲ.
ಅಲ್ಲೆ ಕೊಂಚ ಮೇಲೆ ಶ್ರೀ ಲಕ್ಶ್ಮಿ ನಾರಾಯಣ ಸ್ವಾಮಿಯ ದೇವಸ್ಥಾನವಿತ್ತು . ಅದರ ಅರ್ಚಕರ ಮನೆಯೂ ಹತ್ತಿರವೇ ಇತ್ತು. ಅವರೂ ಕೂಡಲೆ ಬಂದರು . ಆ ದೇವರ ಮಹಾತ್ಮೆಯನ್ನು ಕೇಳಿ ಅಲ್ಲಿನ ಪೂಜೆ ಮುಗಿಸಿಕೊಂಡು ಬಂದು ಅಲ್ಲೇ ಇದ್ದ ಮುಕ್ಕಣ್ಣ ಮಾರಮ್ಮ ಎಂಬ ದೇವಿಯ ದೇವಸ್ಥಾನಕ್ಕೆ ಬಂದೆವು . ಅಂದು ನಮ್ಮ ಅದೃಷ್ಟವೋ ಏನೊ ದೇವಿ ಹೊರಡಿಸುವುದು(ದೇವಿ ಮೈ ಮೇಲೆ ಬರುವ ಸನ್ನಿವೇಶ) ನಡೆಯುತ್ತಿತ್ತು. ಒಂದಷ್ಟು ಜನರು ತಮ್ಮ ತಮ್ಮ ಸಮಸ್ಯೆಗಳನ್ನು ದೇವಿಯ ಮುಂದೆ ಇಡುತ್ತಿದ್ದರು. ದೇವಿಯ ದೊಡ್ಡ ಮುಖವಾಡ ಧರಿಸಿದ ವ್ಯಕ್ತಿಯೂಬ್ಬರ ಮೈ ಮೇಲೆ ದೇವಿ ಬಂದಿತ್ತಂತೆ.
ನಾವು ಹೊರಡಬೇಕು ಎಂದುಕೊಳ್ಳುತ್ತಿದ್ದಂತೆ ದೇವಿಯಿಂದ ನಾವಲ್ಲೇ ಇರಬೇಕೆಂಬ ಅಪ್ಪಣೆಯಾಯಿತು .
ಫೋಟೋ ಕ್ಲಿಕ್ಕಿಸಲು ಭಯ. ಹಾಗಾಗಿ ಫೋಟೊ ತೆಗೆಯಲಿಲ್ಲ
ಅಷ್ಟರಲ್ಲಿ ನನ್ನ ಮಗಳು ಆ ಮಾಮಿಯನ್ನು(ದೇವಿಯನ್ನು) ಮುಟ್ಟಬೇಕು ಎಂದು ಹಟ ಹಿಡಿದಳು.
ಕೊನೆಗೂ ಹೊರಡಬಹುದೆಂದು ನಮಗೆ ಅಪ್ಪಣೆಯಾಯಿತು . ನನ್ನ ಮಗಳು ದೇವಿಯ ಮುಖವಾಡವನ್ನು ಮುಟ್ಟಿ ಬಂದಳು.
ಕೊನೆಗೂ ಕಟ್ಟೆಯಿಂದ ಹೊರಡುತ್ತಿದ್ದಂತೆ ಅಮ್ಮನ ಕಣ್ಣಲ್ಲಿ ನೀರು .
ಯಾವುದೋ ಹಳೆಯ ನೆನಪು .ನಮ್ಮ ಅಜ್ಜಿಯ ಮನೆಗಾಗಿದ್ದ ಗತಿ ಅವಳಿಗೆ ನೋವು ತಂದಿತ್ತು
ಸಾಧ್ಯವಾದರೆ ಆ ಜಾಗವನ್ನು ಕೊಂಡುಕೊಳ್ಳುವುದೆಂದು ನಿರ್ಧರಿಸಿದೆ.
ನಂತರ ಮತ್ತೆ ಅರಸೀಕೆರೆ ಎಡೆಗೆ ಪಯಣ . ಮುತ್ತಜ್ಜಿಯ ಮನೆ ಊರು ಇವುಗಳ ಬಗ್ಗೆ ಅತೀವ ನಿರೀಕ್ಷೆ ಇಟ್ಟುಕೊಂಡಿದ್ದ ನಮಗೆ ಅಲ್ಲಿನ ಪಾಳು ಜಾಗ, ಪಾಳು ಬಿದ್ದ ಓರು ನಿರ್ಜನ ಬೀದಿಗಳ ನೋಡಿದ ಮೇಲೆ ಮನಸ್ಸು ಭಾರವಾಗಿತ್ತು
ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ಇಲ್ಲಿ ಪ್ರತ್ಯಕ್ಷವಾಗುತ್ತವೆ
Monday, December 1, 2008
Tuesday, November 25, 2008
ಕ್ಶಮಿಸು ನಾ ರಾಧೆಯಲ್ಲ
ಅಂದು ಮತ್ತೆ ಕಿರಣ್ ಬಂದ ."ಪ್ರಿಯಾ" ಮೊತ್ತ ಮೊದಲ ಬಾರಿಗೆ ನನ್ನ ಹೆಸರನ್ನು ಕರೆದಾಗ ಮೈಯಲ್ಲಿ ಎನೋ ಅರಿಯದ ಪುಳಕ. ಅಭಿ ಮೊದಲ ರಾತ್ರಿ ಹತ್ತಿರ ಬಂದಾಗಲೂ ಹೀಗಾಗಿರಲಿಲ್ಲವೇನೋ "ಸಾರಿ ನಾನು ತುಂಬಾ ದಿನ ಹೀಗೆ ನಿರೀಕ್ಷೆ ಇಟ್ಟುಕೊಂಡು ಇರೋಕೆ ಆಗ್ತಾ ಇಲ್ಲ, ನಾನು ಹೇಳುತ್ತಿರೋದು ಮಾಡುತ್ತಿರೋದು ತಪ್ಪು ಅಂತ ನನಗೂ ಗೊತ್ತು . ಆದರೂ ಒಂದು ಮಾತನ್ನು ನಿಮ್ಮ ಹತ್ತಿರ ಕೇಳಲೇಬೇಕು ಅಂತ ನಿರ್ಧಾರ ಮಾಡಿದ್ದೇನೆ"
ನನಗೆ ಗೊತ್ತಿತ್ತು ಅವನು ಏನು ಕೇಳುತ್ತಾನೆಂದು ಆದರೆ ನಾನು ಅದಕ್ಕೆ ಮಾನಸಿಕವಾಗಿ ಸಿದ್ದಳಿರಲಿಲ್ಲ . ಹೇಗಾದರೂ ತಪ್ಪಿಸಿಕೊಳ್ಳಬೇಕಿತ್ತು. "ಕಿರಣ್ ನನಗೆ ಇವತ್ತು ಮನಸು ಸರಿ ಇಲ್ಲ . ಮಾತಿಗಿಂತ ಏಕಾಂತವೇ ಲೇಸಾಗಿದೆ . ಇಂದು ನಾನು ಯಾವ ಮಾತಿಗೂ ಬರೋದಿಲ್ಲ. ಲೀವ್ ಮಿ ಅಲೋನ್ ಪ್ಲೀಸ್"
ಕಿರಣ್ ಸಪ್ಪೆ ಮುಖ ಮಾಡಿಕೊಂಡು ಹೊರಟು ಹೋದ .
ಮನದಲ್ಲಿ ಏನೋ ನೋವು.ತನಗೂ ಅವನಿಗೂ ಯಾವರೀತಿಯಲ್ಲಿ ಸಮ?ವಯಸ್ಸಿನಲ್ಲಿ ಹುದ್ದೆಯಲ್ಲಿ ಎಲ್ಲಾ ರೀತಿಯಿಂದಲೂ ಆತ ಇನೂ ಚಿಗುರು ನಾನೋ ಬಲಿತ ಮರ.
ಚಿಗುರಿಗೆ ಮರ ಆಸರೆಯಾಗಬಲ್ಲುದೆ ಹೊರತು ಮರಕ್ಕೆ ಚಿಗುರು ಎಲ್ಲಿಯ ಆಸರೆ.ಆದರೇನು ಮನಸ್ಸು ಮರ್ಕಟ , ವಿವೇಕದ ಮಾತನ್ನು ಆಲಿಸಲು ಒಪ್ಪುತ್ತಿಲ್ಲ.
ವಿವೇಕ ಹಾಗು ಆಸೆಯ ಮಧ್ಯೆ ಯಾವತ್ತಿಗೂ ಆಸೆಗೆ ಜಯ ಹಾಗೆಯೇ ನನಗೂ ಆಗುತ್ತೇನೋ . ?
ಮುಂದೊಂದೆರೆಡು ದಿನ ಅವನನ್ನು ಭೇಟಿಯಾಗುವ ಅವಕಾಶ ತಪ್ಪಿಸಿಕೊಂಡೆ
ಆದರೂ ಅವನನ್ನು ನೋಡಬೇಕೆಂಬ ಆಸೆ ಬಲವಾಗಿಯೇ ಇತ್ತು.ಅದರಿಂದ ತಪ್ಪಿಸಿಕೊಳ್ಳಲಾಗಲಿಲ್ಲ
ರಾತ್ರಿಗಳಲ್ಲಿ ಅಭಿಯಿಂದ ದೂರ ಉಳಿಯಲಾರಂಭಿಸಿದೆ.
ಅಭಿಗೂ ಅಂತಹ ಅನುಮಾನ ಬರಲಿಲ್ಲ.
ಇಂತಹ ಇಕ್ಕಟ್ಟಿನ ಸಂಧರ್ಭದಲ್ಲೆ ಜರ್ಮನಿಯ ಪ್ರಾಜೆಕ್ಟ್ ಒಂದಕ್ಕೆ ನನ್ನ ಮೂರು ತಿಂಗಳ ಸಮಯ ಬೇಕಿತ್ತು.
ಇಂತಹದೊಂದು ಅವಕಾಶಕ್ಕೆ ನಾನು ಕಾಯುತ್ತಿದ್ದೆ. ನಾನು ನಿರ್ಧರಿಸಬೇಕಿತ್ತು. ಅದಕ್ಕೆ ಎಲ್ಲರಿಂಡ ದೂರವಾಗಿ ಇರುವುದು ಬಹು ಮುಖ್ಯವಾಗಿತ್ತು.
ಚಿದುವನ್ನು ನೋಡಿಕೊಳ್ಳಲು ತಾಯಿಯನ್ನು ಬರಹೇಳಿದೆ.
ಅಭಿ ಖುಶಿಯಾಗಿಯೇ ಕಳಿಸಲು ಒಪ್ಪಿದ.
ಬೇಸರವಾಗಿದ್ದು ಮಾತ್ರ ಕಿರಣ್‌ಗೆ
"ಪ್ರಿಯಾ ನಾನು ನನ್ನಮನಸಿನ ಮಾತು ಹೇಳೋಕೆ ನೀವು ಸಮಯವನ್ನೇ ಕೊಡಲಿಲ್ಲ ಈಗ ಮೂರು ತಿಂಗಳು ನೀವಿಲ್ಲದೆ ನಾನು ಹೇಗಿರಲಿ?"
ನಾನು ಮೌನವಾಗಿದ್ದೆ. ನನಗೆ ಗೊತ್ತು ನನ್ನ ಪ್ರತಿಯೊಂದು ಮಾತು ಬಹಳ ಎಚ್ಚರಿಕೆಯಿಂದ ಆಡಬೇಕಿದೆ. ನನ್ನ ಮಾತು ಅವನಲ್ಲಿ ಯಾವ ಆಸೆಯನ್ನೂ ಉಂಟು ಮಾಡಬಾರದು .
ಈಗ ನಾನು ಎಲ್ಲರಿಂದ ದೂರದಲ್ಲಿ ಬಹುದೂರದಲ್ಲಿದ್ದೇನೆ
ನನ್ನ ಭವಿಷ್ಯದ ಹೆದ್ದಾರಿಯನ್ನು ಹುಡುಕುತ್ತಿದ್ದೇನೆ
ಬಂದು ಎರೆಡು ದಿನಗಳಾಗಿದ್ದವು
ಕಿರಣ್ ಎರೆಡು ಸಲ್ ಫೋನ್ ಮಾಡಿದ್ದ. ಜೀವನದಲ್ಲಿ ಏನೋ ಕಳೆದುಕೊಂಡಿದ್ದೇನೆ ಅನ್ನಿಸುತ್ತಿದೆ ಎಂದು ಮರುಗಿದ್ದ
ಅಭಿಯ ಮೈಲ್ ಮಾತ್ರ ಬಂದಿತ್ತು. ಮನೆಯ ವಾರ್ತೆಗಳ ಬಗ್ಗೆ ಕೊರೆದಿದ್ದ. ತನ್ನ ಕೆಲಸ ಹಾಗು ಮನೆಯ ಮಧ್ಯೆ ಸಮಯವೇ ಇಲ್ಲದಂತಾಗಿದೆ ಎಂದಿದ್ದ.
ನನ್ನ ಕೆಲಸವೂ ಸಾಗುತ್ತಿತ್ತು
ಕಿರಣನ ಇಲ್ಲದಿರುವಿಕೆ ಮೊದಮೊದಲು ಕಾಡತೊಡಗಿತು .
ಅವನ ನೆನಪು ಹಿಂಸಿಸಿತು. ನಂತರ ಮೂರು ದಿನಕ್ಕೆ ಮರೆಯಲಾರಂಭಿಸಿದೆ.
ಚಿದು ಬಳಿಯಲ್ಲಿ ಇಲ್ಲದಿರುವುದು ಹೃದಯಕ್ಕೆ ನೋವುಂಟಾಗತೊಡಗಿತು
ಅವನ ಅಮ್ಮ ಎಂಬ ಮಾತು ತಂಟೆ, ಚೇಷ್ಟೇ ನೆನಪಾಗತೊಡಗಿದವು
ನಾಲ್ಕನೆಯದಿನಕ್ಕೆ
ಅಭಿ ಫೋನ್ ಮಾಡಿದ್ದ
"ಪ್ರಿಯಾ ನೀನಿಲ್ಲ ಅಂದ್ರೆ ಎಷ್ಟು ಬೇಜಾರಾಗುತ್ತೆ ಅಂತ ನಂಗೆ ಈಗ ಗೊತ್ತಾಗ್ತಿದೆ. ನಿನ್ನ ಇಂಪಾರ್ಟೆನ್ಸ್ ನಂಗೆ ಈಗ ತುಂಬಾ ಗೊತ್ತಾಗ್ತಿದೆ. ಯಾವಾಗ ಮೂರು ತಿಂಗಳು ಕಳೆಯುತ್ತೋ ಅನ್ನಿಸ್ತಿದೆ"
ಚಿದೂ ಫೋನ್‍ನಲ್ಲೆ ಅಳಲಾರಂಭಿಸಿದ. ನನಗೂ ಅಳು ಉಕ್ಕಿತು.
ಚಿದು ಹುಟ್ಟಿದ ದಿನದ ನೆನಪಾಯ್ತು.
ಬೆನ್ನ ಹಿಂದೆಯೇ ನನ್ನ ಅಭಿಯ ದಾಂಪತ್ಯ ಜೀವನದ ಸುಖೀ ಕ್ಷಣಗಳು ಅರಿವಿಗೆ ಬರಲಾರಂಭಿಸಿದವು.
ಕಿರಣ್ ಮತ್ತೆ ಮೈಲ್ ಮಾಡಿದ
"ಪ್ರಿಯಾ ಐ ಅಮ್ ಬಿಕಮಿಂಗ್ ಮ್ಯಾಡ್. ಯಾವಾಗ ನೋಡ್ತೀನೋ ಅಂತ ಅಗಿದೆ, ನಾನು ನಿಮ್ಮ ಹತ್ತಿರ ತುಂಬಾ ಅಂದ್ರೆ ತುಂಬಾ ಮಾತಾಡಬೇಕಿದೆ. ಅದೆಲ್ಲಾ ಹೇಳದೆ ಎಲ್ಲಿ ಸತ್ತು ಹೋಗ್ತೀನೊ ಅಂತನ್ನಿಸ್ತಿದೆ"ಅವಲತ್ತುಕೊಂಡ
ರಿಪ್ಲೈ ಮಾಡಲಿಲ್ಲ ಈ ಸಲ.
ಹೀಗೆ ಮೂರು ಸಲವಾದ ನಂತರ ಕಿರಣ್ ಮತ್ತೆ ಮೈಲ್ ಮಾಡಲಿಲ್ಲ. ಮಾಡಿದರೂ ಕೆಲಸದ ವಿಷಯಕ್ಕೆ ಮಾತ್ರ ಮಾಡಿದ್ದಷ್ಟೆ.
ಎರೆಡು ತಿಂಗಳು ಕಳೆಯಿತು.
ಮನಸ್ಸು ಸದೃಡವಾಗಿತ್ತು
ರಾಧೆ ಏಕೆ ಕೃಷ್ಣನ ಮಡದಿಯಾಗಲಿಲ್ಲ ಎಂಬ ಪ್ರಶ್ನೆ ನನ್ನನ್ನು ಆಗಾಗ ಕಾಡಿತ್ತು .ಆದರೆ ಅದಕ್ಕೆ ಉತ್ತರ ಇತ್ತೀಚಿಗೆ ಹೊಳೆಯಲಾರಂಭಿಸಿತು.
ನನಗೆ ಬೇಕಿದ್ದುದ್ದು ನನಗಾಗಿ ಬೇಡುವ ಜೀವ ನಾನಿಲ್ಲದೆ ಬದುಕೇಇಲ್ಲ ಎನ್ನುವ ಮನಸ್ಸು ಅದು ನನ್ನ ಅಭಿಯದೇ ಆಗಿತ್ತು.
ಸಂಸಾರದ ಜವಾಬ್ದಾರಿಯ ಕಾರಣದಿಂದ ಒಬ್ಬರಿಗೊಬ್ಬರು ಅಪರಿಚಿತರಂತೆ ಇದ್ದರೂ ಜೀವನದಲ್ಲಿ ಇಬ್ಬರಿಗೂ ಇಬ್ಬರೂ ಬೇಕಿದ್ದರು
ಆದರೆ ಅದು ನನಗೆ ಕಾಣದೇ ಹೋಯ್ತು. ಕಿರಣನ ಆಕರ್ಷಣೆ ಆ ಅಗತ್ಯವನ್ನು ಮರೆಮಾಚಿತ್ತು.
ಅಭಿಯ ಸಾಂಗತ್ಯದ ಕೊರತೆ ಕಾಡಿದಷ್ಟು ಕಿರಣ್‍ನ ನೆನಪು ಕಾಡಲಿಲ್ಲ.
ಪ್ರಾಜೆಕ್ಟ್ ಯಶಸ್ವಿಯಾಗಿ ಮುಗಿಯಿತು.
ನನ್ನ ಭವಿಷ್ಯದ ಹೆದ್ದಾರಿಯೂ ಸ್ಪಷ್ಟವಾಯ್ತು.
ಮೂರುತಿಂಗಳ ಸುಧೀರ್ಘ ಅವಧಿಯ ನಂತರ ನಾನು ಮನೆಗೆ ಹೋಗಿದ್ದಕ್ಕೆ ಮನೆಯಲ್ಲಿ ಸಂತಸ , ಸಂಭ್ರಮ, ಅಭಿಯಂತೂ "ಇನ್ನೊಮ್ಮೆ ಈ ತರಹ ದೂರ ಕಳಿಸಿದರೆ ಕೆಲಸವೇ ಬೇಡ . ನಂಗೆ ನೀನಿರದೆ ಇರಕಾಗಲ್ಲ. " ಎಂದು ಬೈದ.
ಚಿದೂವಂತೂ ನನ್ನ ಸೆರಗನು ಕಟ್ಟಿಕೊಂಡೆ ಓಡಾಡುತ್ತಿದ್ದ .
ಮೊದಲಬಾರಿಗೆ ನನ್ನ ಅವಶ್ಯಕತೆ, ಜವಾಬ್ದಾರಿ, ಸ್ಥಾನ ಅರ್ಥವಾಯ್ತು. ಇದನ್ನು ಬಿಟ್ಟು ಪ್ರೇಮವೆಂಬ ಮಾಯಾಜಿಂಕೆಯ ಹಿಂದೆ ಓಡುತ್ತಿದ್ದೆನಲ್ಲ ನಾನೆಂಥಾ ಫೂಲ್ ಛೆ.
ಆಫೀಸಿಗೆ ಬಂದೆ .
ಕಿರಣ್‍ನ್ ಕಣ್ಣಲ್ಲಿ ಕಾತುರ, ಸಂತೋಷ ಎಲ್ಲವೂ ಇದ್ದವು.
"ಪ್ರಿಯಾ ಕೊನೆಗೂ ಬಂದಿರಲ್ಲ . ನಿಮ್ಮ್ಮ ಹತ್ತಿರ ತುಂಬಾ ಮಾತಾಡಬೇಕಿದೆ"
ನಾನು ಈ ಸಲ ತಲೆ ಕಣ್ಣನ್ನೇ ದಿಟ್ಟಿಸುತ್ತಾ ನುಡಿದೆ
"ನಿಮ್ಮನ್ನ ಇಲ್ಲಿಂದ ಜಯನಗರ ಬ್ರಾಂಚ್‌ಗೆ ಹಾಕಿದಾರೆ ಅಲ್ಲಿ ನಿಮ್ಮ ಅವಶ್ಯಕತೆ ಇದೆ."
"ಹಾಕಿದ್ದಾರೊ ಅಥವಾ ಹಾಕಿಸಿದ್ದಾರೋ ಪ್ರಿಯಾ "
"ಪ್ಲೀಸ್ ಕಾಲ್ ಮಿ ಮೇಡಮ್. ನಾನು ನಿಮಗಿಂತ ಹತ್ತು ವರ್ಷ ದೊಡ್ಡವಳು . ಮತ್ತೆ ನಿಮಗಿಂತ ಸೀನಿಯರ್. ನೆನಪಿರಲಿ"
"ಮೇಡಮ್ ನನ್ನ ಮನಸಿನ ಮಾತು ?"
"ಕಿರಣ್ ಇದು ಆಫೀಸ್ ನಾನು ನಿಮ್ಮ ಹೆಡ್, ನೀವು ನನ್ನ ಸಬ್ ಆರ್ಡಿನೇಟ್. ಆ ವಿಷ್ಯವಾಗಿ ಏನೊ ಬೇಕಾದರೂ ಮಾತಾಡಲೂ ನಾನು ರೆಡಿ. ಅದಿಲ್ಲವಾದರೆ ನಾನು ನಿಮ್ಮ ಮನಸಿನ ಮಾತಿಗೆ ಸಿಗಲು ಸರಿಯಾದ ವ್ಯಕ್ತಿ ಅಲ್ಲ."
ತಲೆ ತಗ್ಗಿಸಿಕೊಂಡು ಹೋಗುತ್ತಿದ್ದವನನ್ನೆ ನೋಡುತ್ತಾ ಮನಸ್ಸು ಹೇಳಿತು
"ಕ್ಷಮಿಸು ನಾ ರಾಧೆಯಲ್ಲ ಅಗುವುದೂ ಇಲ್ಲ"
’

ಒಲವೋ ಅಥವ ಸಂಸಾರವೋ -ಭಾಗ -೧
"ಪ್ರಿಯಾ ಇವತ್ತಿನಿಂದ ನಿಮ್ಮ ಡಿವಿಸನ್‌ಗೆ ಹೊಸ ಮೆಂಬರ್ . " ಶ್ರೀನಾಥ್ ಪರಿಚಯಿಸಿದಾಗ ಕಂಪ್ಯೂಟರ್ ಪರದೆಯಿಂದ ತಲೆ ಎತ್ತಿದವಳಿಗೆ ಹಸನ್ಮುಖಿಯಾದ ಆ ಯುವಕ ಕಾಣಿಸಿದ. ಎಲ್ಲೋ ನೋಡಿದಂತಿದೆ ಎನಿಸಿತಾದರೂ as a Division head ಏನನ್ನೂ ತೋರದೆ ಹಲೊ ಎಂದು ಕೈ ನೀಡಿದೆ ಆತನೂ ತನ್ನ ಹೆಸರನ್ನೂ ಕಿರಣ್ ಎಂದು ಪರಿಚಯಿಸಿಕೊಂಡ ಕ್ಯಾಂಪಸ್ ಇಂಟರ್ವ್ಯೂ ನಲ್ಲಿ ಸೆಲೆಕ್ಟ್ ಆಗಿದ್ದ ಪ್ರತಿಭಾನ್ವಿತ ಯುವಕ ಆತ ಎಂದೂ ತಿಳಿಯಿತು . ಹೆಡ್ ಆಫೀಸ್‍ನಲ್ಲಿ ಟ್ರೈನಿಂಗ್ ಯಶಸ್ವಿಯಾಗಿ ಮುಗಿಸಿ ಇಂದಿನಿಂದ ಡ್ಯೂಟಿಗೆ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು.
ಆತನ ಮುಖದಲ್ಲಿ ಗಲಿಬಿಲಿ ಗಾಬರಿ ಎದ್ದು ಕಾಣುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ನೆನೆಪಿಗೆ ಬಂದಿತು . ಇಂದು ಬೆಳಗ್ಗೆ ಕಾರ್ ಡ್ರೈವ್ ಮಾಡುವಾಗ ಬೈಕ್‌ನಲ್ಲಿ ಸಿಕ್ಕ ಯುವಕ ಈತನೇ ಅಲ್ಲವೇ? ಒಮ್ಮೆ ಕಣ್ಣು ಹೊಡೆದು ಸಿಳ್ಳೆ ಹಾಕಿ , ಬ್ಯೂಟಿಫುಲ್ ಎಂದು ಉಸುರಿ ಮಿಂಚಿನಂತೆ ಮಾಯವಾಗಿದ್ದ.
ಮನಸಿನಲ್ಲೇ ಈಡಿಯಟ್ ಎಂದು ಬೈದುಕೊಂಡೆ
ಮದುವೆಯಾಗಿ ಒಂದು ಮಗುವಿನ ತಾಯಿ ತಾನು ತನಗೆ ಇನ್ನೂ ಇಪ್ಪತ್ತು ಮೂರರ ಈ ಫೋರ ಲೈನ್ ಹಾಕುವುದೇ. ಬೆಳಗ್ಗೆ ಸಿಡಿಮಿಡಿಗೊಂಡಿದ್ದ ಮನಸಿಗೆ ಈಗ ಅವನನ್ನು ನೋಡಿ ಇನ್ನಷ್ಟು ಕೋಪ ಬಂದಿತು.
ಅವನಿಗೊಬ್ಬ ಮೆಂಟಾರ್ ಅನ್ನು ನೇಮಿಸಿದೆ. ಕಲಾ ಹೋದ ವರ್ಷ ತಾನೆ ಸೇರಿದ್ದಳು ಬಲು ಚುರುಕು ಅವಳು ಮಾಡಬೇಕಾದ ಕೆಲಸವನ್ನೆಲ್ಲಾ ಹೇಳಿ ಕ್ಯಾಬಿನ್‌ಗೆ ಆಗಮಿಸಿದೆ. ಕೆಲಸದಲ್ಲಿ ತನ್ಮಯಳಾದೆ
"ಮೇಡಮ್ " ಕೆಲಸಕ್ಕೆ ಭಂಗ ಬಂದಿತು ತಲೆ ಎತ್ತಿದೆ ಕಿರಣ್ ಬಂದು ನಿಂತಿದ್ದ
ಮೇಡಮ್ ಐಯಾಮ್ ಸಾರಿ ಫಾರ್ ವಾಟ್ ಹ್ಯಾಪೆನ್ಡ್ ಇನ್ ದ ಮಾರ್ನಿಂಗ್" ತಲೆ ಕೆಳಗೆ ಹಾಕಿ ಜೋಲು ಮೋರೆ ಮಾಡಿಕೊಂಡು ಉತ್ತರಿಸಿದ.
ಬೈಯ್ಯಬೇಕೆಂದವಳಿಗೆ ಏಕೊ ಮಾತುಗಳೇ ಬರಲಿಲ್ಲ . ಆತನ ಮುಖ ಲಕ್ಷಣವೇ ಹಾಗಿತ್ತೇನೂ ತಿಳಿಯಲಿಲ್ಲ.
" ಪರವಾಗಿಲ್ಲ ಬಿಡಿ . ನಿಮ್ಮ ವಯಸಿನಲ್ಲಿ ಇದೆಲ್ಲಾ ಕಾಮನ್. ಇನ್ನು ಚಿಕ್ಕ ವಯಸ್ಸು ಹಾಗೆ ಆಡಬೇಕನ್ನಿಸುತ್ತೆ . ಆದರೆ ನನ್ನ ಜಾಗದಲ್ಲಿ ಬೇರಾರಾದರೂ ಇದ್ದರೆ ಖಂಡಿತಾ ಪ್ರಾಬ್ಲಮ್ ಆಗ್ತಿತ್ತು."
"ಇಲ್ಲ ಮೇಡಮ್ ನೀವು ದೊಡ್ಡ ವೇದಾಂತಿ ಥರ ಮಾತಾಡ್ತಾ ಇದೀರಲ್ಲ ನಿಮಗೇನು ತುಂಬಾ ವಯಸ್ಸಾಗಿದೆಯಲ್ಲ. ಇಷ್ಟು ಚಿಕ್ಕ ವಯಸಿನಲ್ಲಿ ಇಡೀ ಡಿವಿಸನ್ ಹೆಡ್ ಆಗಿದೀರಾ ಅಂದ್ರೆ ರಿಯಲ್ಲಿ ಗ್ರೇಟ್ "
"ನಿಮಗ್ಯಾರು ಹೇಳಿದ್ರು ನಂಗೆ ಚಿಕ್ಕ ವಯಸ್ಸು ಅಂತ. ಅಲ್ರೆಡಿ ಐಯಮ್ 32 ಇಯರ್ಸ್ ಒಲ್ಡ್ ಯು ನೊ?" ಮಾತು ಹಳಿ ತಪ್ಪಿತು ಅನ್ನಿಸಿತು. ಆದರೆ ಜಾರಿಯಾಗಿತ್ತು ಮಾತು.
" 32 ಮತ್ತೆ ನೀವು . ಮೇಡಮ್ ಐ ಕಾಂಟ್ ಬಿಲೀವ್ ಇಟ್, ನೀವು ಸುಳ್ಳು ಹೇಳಿ ನನ್ನ ಅವಾಯ್ಡ್ ಮಾಡ್ತಾ ಇದೀರಾ" ಆತ ಉದ್ಗರಿಸಿದವನ ಮುಖದಲ್ಲಿ ಏನೂ ಒಂಥರಾ ಆಕರ್ಷಣೆ ಎನಿಸಿತು.
"ನಾನು ನಿಮಗ್ಯಾಕೆ ಸುಳ್ಳು ಹೇಳಲಿ. ಅಂಡ್ ವೈ ಶುಡ್ ಐ ಅವಾಯ್ಡ್ ಯು?"
ಕಾಫೀ ಟೈಮ್ ಆದದ್ದರಿಂದ ನಗುತ್ತಾ ಹೊರಗೆ ಬಂದೆ.
ಹೀಗೆ ಶುರುವಾದ ನಮ್ಮ ಸ್ನೇಹ ನಮ್ಮನ್ನು ಹತ್ತಿರ ತಂತು
ಕಿರಣ್‌ನ ನಗು ಆತನ ಮಾತು ಮಿಂಚಿನಂತಹ ನಡೆ ನನ್ನನ್ನು ಮೋಡಿ ಮಾಡಿತ್ತು
ದಿನೇ ದಿನೇ ಆತ ನನ್ನನ್ನು ಹೊಗಳುವುದು ಹೆಚ್ಚಾಗುತಿತ್ತು. ಮದುವೆಯಾಗಿ ಇಷ್ಟು ದಿನವಾದರೊ ಅಭಿ ಒಮ್ಮೆಯೂ ನನ್ನ ಬಗ್ಗೆ ಇಂತಹ ಮೆಚ್ಚುಗೆಯ ಮಾತಾಡಿರಲಿಲ್ಲ.
ಪ್ರಾಜೆಕ್ಟ್ ಅದೂ ಇದೂ ಅಂತ ಟೂರ್‌ನಲ್ಲೇ ಇರುತ್ತಿದ್ದ ಆತ ಬಸವಳಿದಿರುತ್ತಿದ್ದ . ನಾನು ಮನೆಗೆ ರಾತ್ರಿ ೧೦ಕ್ಕೆ ಹೋದರೆ ಆತ ನಿದ್ರಿಸಿರುತ್ತಿದ್ದ . ಬೆಳಗ್ಗೆ ನಾನು ಏಳುವ ವೇಳೆಗೆ ಕೆಲಸಕ್ಕೆ ಹೊರಟಿರುತಿದ್ದ. ನಮ್ಮಿಬ್ಬರ ಮಾತುಗಳು, ಭೇಟಿಗಳು , ಮಿಲನಎಲ್ಲವೂ ಕೇವಲ ಶನಿವಾರ ಅಥವ ಭಾನುವಾರ ಅದೂ ನಮ್ಮಿಬ್ಬರಿಗೂ ಕೆಲಸದ ಒತ್ತಡ ಇಲ್ಲದಾಗ. ಬೇರೆ ದಿನ ಮೈಲ್ನಲ್ಲಿ ತಪ್ಪಿದರೆ ಮೊಬೈಲ್ ನಲ್ಲಿ ಮಾತಾಡಿಕೊಂಡು ತೃಪ್ತಿಯಾಗುತ್ತಿದ್ದೆವು
ಚಿದೂ ನಾನು ಹೋಗುವ ವೇಳೆಗಾಗಲೆ ಕೆಲಸದಾಳು ಸರಸ್ವತಿಯ ಬಳಿಯಲ್ಲೇ ಜೋಗುಳ ಹಾಡಿಸಿಕೊಂಡು ಮಲಗಿರುತ್ತಿದ್ದ.
ಅಮ್ಮನ ನೆನಪೂ ಅವನಿಗಾಗುತಿರಲಿಲ್ಲವೇನೂ.
ಇಂತಹ ಸಂಧರ್ಭದಲ್ಲಿ ನನಗೆ ಕಿರಣ್ ಹೆಚ್ಚು ಆಪ್ತನಾಗುತ್ತಿದ್ದ.
ಆತ ನನಗಷ್ಟೆ ಅಲ್ಲ ಆಫೀಸಿನ ಎಲ್ಲರಿಗೂ ಅಚ್ಚು ಮೆಚ್ಚಿನವನಾಗುತ್ತಿದ್ದ .ಆದರೆ ನನ್ನೊಡನೆ ಮಾತಾಡುವಾಗ ಅವನ ಕಣ್ಣಲ್ಲಿ ಕಾಣುತಿದ್ದ ಒಲವನ್ನು ಗ್ರಹಿಸಲಾರದಷ್ಟು ಅಪ್ರಬುದ್ದಳೇನಾಗಿರಲಿಲ್ಲ ನಾನು.
ನಾನು ಅವನಿಗೆ ಅಪ್ರೈಸಲ್ ವಿಷಯದಲ್ಲಾಗಲಿ ಕೆಲಸದ ವಿಚಾರದಲ್ಲಾಗಲಿ ಹೆಚ್ಚಿನ ಸಹಾಯ ಮಾಡಲಾರಂಭಿಸಿದೆ.
ಜೊತೆ ಜೊತೆಗೆ ನನಗೇನೂ ಭಯವಾಗತೊಡಗಿತು . ನಾನು ತಪ್ಪು ಮಾಡುತ್ತಿಲ್ಲವಷ್ಟೆ? ನನ್ನ ಅವನ ಸ್ನೇಹ ಬರೀ ಸ್ನೇಹ ವಾಗದೆ ಇನ್ನೇನೋ ಆಗಬಹುದೆಂಬ ಅಂಜಿಕೆ ಅದು.
ತಿಂಗಳಾರು ಕಳೆಯಿತು.
ಕಿರಣ್ ನನ್ನನ್ನು ನೋಡದಿದ್ದರೆ ಚಡಪಡಿಸುತ್ತಿದ್ದ ಅದನ್ನು ಮಾತಿನಲ್ಲೂ ವ್ಯಕ್ತ ಮಾಡುತ್ತಿದ್ದ
ಒಮ್ಮೆ ಜ್ವರ ಬಂದು ಮಲಗಿದಾಗ ದಿನಕ್ಕೊಮ್ಮೆಯಾದರೂ ಮನೆಗೆ ಬಂದು ಹೋಗುತ್ತಿದ್ದ. ಚಿದುವನ್ನು ಸ್ನೇಹ ಪೂರ್ವಕವಾಗಿ ಮಾತಾಡಿಸುತ್ತಿದ್ದ.
ಅಭಿಗೆ ನಾನು ಅನ್ಯಾಯ ಮಾಡ್ತಾ ಇದೀನಾ ? ಇದು ತಪ್ಪಲ್ಲವಾ. ಮನಸಿನ ಕೂಗು
ಮನಸ್ಸು ಆತ್ಮೀಯರನ್ನು ಬಯಸುತ್ತಿದೆ ಅಷ್ಟೆ . ಇನ್ನೇನೂ ಅಲ್ಲ ನಾನೆ ಸಮಾಧಾನ ಮಾಡಿಕೊಂಡೆ.
ಕಿರಣ್ ಅಂದು ಅವನ ಮನಸ್ಸನ್ನು ಬಿಚ್ಚಿದ "ಮೇಡಮ್ ನಾನು ತುಂಬಾ ಹುಡುಗೀರ್‍ಅನ್ನು ನೋಡಿದೀನಿ . ಆದರೆ ನಿಮ್ಮಂತಹ ವಿಶೇಷವಾದವರನ್ನು ಕಂಡಿರಲಿಲ್ಲ. ನಿಮಗೇನಾದರೂ ಸೆಕಂಡ್ ಆಪ್ಷನ್ ಇದ್ದರೆ ಅದು ನಾನೆ ಆಗಿರಬೇಕಂತ ನನ್ನ ಆಸೆ"
ನಾನು ಏನೂ ಹೇಳಿರಲಿಲ್ಲ ಸುಮ್ಮನೆ ನೆಲ ನೋಡಿದೆ
ಆತ ಉತ್ತೇಜಿತನಾದನೋ ಏನೋ ಅವನ ನನ್ನ ಒಡನಾಟ ಹೆಚ್ಚಾಗತೊಡಗಿತು.
ಕಿರಣನ ನನ್ನ ಮೇಲಿನ ಪ್ರೀತಿ ಕೇವಲ ದೈಹಿಕ ಆಕರ್ಷಣೆಯಾಗಿದ್ದರೆ ಏನು ಗತಿ?
ಅದಕ್ಕೆ ಯಾವ ಆಧಾರವೂ ಸಿಗಲಿಲ್ಲ ಇಂದಿನವರೆಗೆ ಕಿರಣ ತನ್ನ ಬಳಿ ಒಮ್ಮೆಯೂ ಕೆಟ್ಟದಾಗಿ ನಡೆದಿರಲಿಲ್ಲ .
ಅಭಿಯ ಜೋತು ಬಿದ್ದ, ಕಳೆಯಾಗಲಿ ಒಲವಾಗಲಿ ಇರದ ಆ ಮೊಗವೆಲ್ಲಿ? ಸ್ನೇಹ ತುಂಬಿದ ನಡೆ, ಒಲವು ತುಂಬಿದ ಕಂಗಳು, ಎಂಥಹವರನ್ನೂ ಅರಳಿಸಬಲ್ಲಂಥ ಆ ನಗೆ ತುಂಬಿರುವ ಕಿರಣನೆಲ್ಲಿ?
ಅಭಿ ನನ್ನ ಸಾಮೀಪ್ಯವನ್ನೂ ಗ್ರಹಿಸದವನ ಹಾಗೆ ನಿರ್ಜೀವ ಮನುಷ್ಯ, ಆದರೆ ಕಿರಣ ನನ್ನಿರುವಿಕೆಯಿಂದಲೇ ಇಡಿ ಪ್ರಪಂಚವನ್ನು ಗೆಲ್ಲುತ್ತೇನೆಂಬ ಹುಮ್ಮಸ್ಸು ತುಂಬಿರುವ ವ್ಯಕ್ತಿ. ನಿರ್ಜೀವ ವ್ಯಕ್ತಿಯಲ್ಲೂ ಚೈತನ್ಯ ತುಂಬುವಂತಹ ವ್ಯಕಿತ್ವ
ನಾನು ನಿರ್ಧಾರ ಮಾಡಬೇಕಿತ್ತು, ಒಲವೋ ಅಥವ ಸಂಸಾರವೋ

Subscribe to:
Posts (Atom)